Latest

ಹುಬ್ಬಳ್ಳಿಯಲ್ಲಿ ಬುಧವಾರ ಗೀತಾ ಮಹಾ ಸಮರ್ಪಣೆ

 

 

  ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ಭಗವದ್ಗೀತಾ ಅಭಿಯಾನದ ಅಂಗವಾಗಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬುಧವಾರ ಗೀತಾ ಜಯಂತಿ ಹಾಗೂ ಮಹಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೋಂದಾ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ನೇತೃತ್ವದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಲಿದ್ದಾರೆ. ಸುಮಾರು 10 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡು ಗೀತೆ ಪಠಣ ಮಾಡಲಿದ್ದಾರೆ. ರಾಜ್ಯಪಾಲ ವಜುಬಾಯಿ ವಾಲಾ ಗೀತಾಂತರಂಗ-1 (ಇಂಗ್ಲಿಷ್‌) ಪುಸ್ತಕವನ್ನು  ಲೋಕಾರ್ಪಣೆಗೊಳಿಸಲಿದ್ದಾರೆ.

Home add -Advt

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಮೂರುಸಾವಿರಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಆರ್ಷ ವಿದ್ಯಾಪೀಠದ ಚಿದ್ರೂಪಾನಂದ ಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಾನ್ನಿಧ್ಯ ವಹಿಸುವರು. ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಸಂಸದ ಪ್ರಹ್ಲಾದ ಜೋಶಿ, ಶ್ರೀ ಭಗವದ್ಗೀತಾ ಅಭಿಯಾನ ಧಾರವಾಡ ಜಿಲ್ಲಾ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಉದ್ಯಮಿ ವಿಜಯ ಸಂಕೇಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

Related Articles

Back to top button