Latest

*ಮೇ 22ರಿಂದ 3 ದಿನ ವಿಧಾನಸಭೆ ಅಧಿವೇಶನ; ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೇ 22 ರಿಂದ ಮೂರು ದಿನಗಳ ಕಾಲ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಮಾಹಿತಿ ನೀಡಿದ್ದು, ಸೋಮವಾರ, ಮಂಗಳವಾರ ಹಾಗೂ ಬುಧವಾರ ಮೂರು ದಿನ ವಿಧಾನಸಭೆ ಅಧಿವೇಶನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಿಸಲಿದ್ದಾರೆ ಎಂದರು.

Home add -Advt

ಅಧಿವೇಶದಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಬಳಿಕ ನೂತನ ಸ್ಪೀಕರ್ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

https://pragati.taskdun.com/cm-siddaramaiahpressmeetcabinet-meetingannounce5-guarantee/

Related Articles

Back to top button