Latest

*ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್*

ಬಸವ ಮಂಟಪ ಕೃತಿಯಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಲೇಖಕ ರವಿ ಹಂಜ್ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ ಹಲವು ಮಹತ್ವದ ಅಂಶಗಳನ್ನು ಉಲ್ಲೇಖಿಸಿರುವ ರವಿ ಹಂಜ್ ನಾನು ಕಟ್ಟಾ ವೀರಶೈವ ಲಿಂಗಾಯತನಾಗಿದ್ದು, ಬಸವಣ್ಣನವರ ಅನುಯಾಯಿಯಾಗಿದ್ದೇನೆ. ಬ್ರಿಟಿಷ್ ಇತಿಹಾಸಕಾರ ಬಿ.ಎಲ್. ರೈಸ್ ಅವರ ಮೈಸೂರು ಗೆಜೆಟೀಯರ್ (Mysore Gazetteer) ಆಧರಿಸಿ ನಾನು ಆ ಲೇಖನವನ್ನು ಬರೆದಿದ್ದೇನೆ. ಆದರೆ, ಕಾನೂನನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೂರಿದ್ದಾರೆ.

Related Articles

Back to top button