
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿನ ಉದ್ಯಾನಗಳ ಅಭಿವೃದ್ಧಿ ಮಾಡುವುದಾಗಿ ಶಾಸಕ ಅಭಯ ಪಾಟೀಲ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದರು. ಅದರಂತೆ ಒಟ್ಟೂ 1.06 ಕೋಟಿ ರೂ. ವೆಚ್ಚದಲ್ಲಿ ಗಾರ್ಡನ್ ಗಳ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಕಾಮಗಾರಿಗೆ ಚಾಲನೆ ನೀಡಿದರು.
ಶಾಂತಿನಗರ ಗಾರ್ಡನ್ ನಲ್ಲಿ ಗಾರ್ಡನ್ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಬಹುತೇಕ ಎಲ್ಲ ಗಾರ್ಡನ್ ಗಳನ್ನೂ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಅಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.
 
					 
				 
					 
					 
					 
					
 
					 
					 
					


