ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆಳವಟ್ಟಿ ಹಾಗೂ ಎಳೆಬೈಲ್ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಚಾಲನೆ ನೀಡಿದರು.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು 1.80 ಕೋಟಿ ರೂ ವೆಚ್ಚದಲ್ಲಿ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕ್ಷೇತ್ರಕ್ಕೆ ವಿವಿಧ ಯೋಜನೆಗಳಿಂದ ಸಾಕಷ್ಟು ಅನುದಾನ ತರಲಾಗುತ್ತಿದ್ದು, ಗ್ರಾಮಸ್ಥರ ಬಹುಕಾಲದ ಬೇಡಿಕೆಗಳನ್ನೆಲ್ಲ ಹಂತ ಹಂತವಾಗಿ ಈಡೇರಿಸಲಾಗುತ್ತಿದೆ. ನಿಮ್ಮ ಪ್ರೋತ್ಸಾಹ, ಸಹಕಾರವಿದ್ದರೆ ಆದಷ್ಟು ಶೀಘ್ರ ಗ್ರಾಮೀಣ ವಿಧಾನಸಭಾ ಕ್ಷೇತ್ರ ಮಾದರಿ ಕ್ಷೇತ್ರವಾಗಿ ಮಾರ್ಪಡಲಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.
ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ