Kannada NewsKarnataka News

ಧರ್ಮಟ್ಟಿ ಹಳ್ಳದ ಸೇತುವೆ ಕಾಮಗಾರಿಗೆ ಒಂದು ಕೋಟಿ ರೂ.

ಧರ್ಮಟ್ಟಿ ಹಳ್ಳದ ಸೇತುವೆ ಕಾಮಗಾರಿಗೆ ಒಂದು ಕೋಟಿ ರೂ.

 

ಪ್ರಗತಿವಾಹಿನಿ ಸುದ್ದಿ, ಮೂಡಲಗಿ :

Related Articles

ಮಸಗುಪ್ಪಿ-ಮೂಡಲಗಿ ರಸ್ತೆಯ ಕಿ.ಮೀ. ೪ ರಲ್ಲಿ ಧರ್ಮಟ್ಟಿ ಹಳ್ಳದ ಸೇತುವೆ ದುರಸ್ತಿ ಕಾಮಗಾರಿಗೆ ನೀರಾವರಿ ನಿಗಮದಿಂದ ಒಂದು ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಘಟಪ್ರಭಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮಸಗುಪ್ಪಿ-ಮೂಡಲಗಿ ರಸ್ತೆಯ ಸೇತುವೆಯ ತಡೆಗೋಡೆ ಕುಸಿದಿರುವ ಹಿನ್ನೆಲೆಯಲ್ಲಿ ಈ ಅನುದಾನ ಮಂಜೂರಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಸಗುಪ್ಪಿ-ಮೂಡಲಗಿ ರಸ್ತೆಯ ಮಧ್ಯ ಧರ್ಮಟ್ಟಿ ಹಳ್ಳದ ಸೇತುವೆ ಕುಸಿದುಬಿದ್ದ ಪರಿಣಾಮ ಸಾರ್ವಜನಿಕ ಸಂಚಾರ ಅಸ್ತವ್ಯಸ್ಥವಾಗಿತ್ತು. ಅಲ್ಲದೇ ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಿಧಾನಸಭೆ  ಅಧಿವೇಶನದಲ್ಲಿ ಅಂದಿನ ಜಲಸಂಪನ್ಮೂಲ ಸಚಿವರಿಗೆ ಒತ್ತಾಯಿಸಿದ್ದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸೇತುವೆ ದುರಸ್ತಿ ಹಾಗೂ ಸೇತುವೆಯ ಎರಡೂ ಬದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

Home add -Advt

Related Articles

Back to top button