Belagavi NewsBelgaum NewsKannada NewsKarnataka News

*ರಾಮದುರ್ಗ : ಗ್ರಾಮ ಲೆಕ್ಕಾಧಿಕಾರಿ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ!*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದನ್ನು ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ನಲ್ಲಿ ಜಪ್ತಿ ಮಾಡಲಾಗಿದೆ. 

ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ ವಿಠಲ್ ಢವಳೇಶ್ವರ ಎಂಬುವರ ಕಾರಿನಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಬಂದಿತ್ತು. ರಾಮದುರ್ಗ ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ ಮಾಡಿದ್ದು ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ವರ್ಗಾವಣೆ ಮಾಡಲಾಗಿದೆ.

Related Articles

Back to top button