Latest

1 ಕೋಟಿ 15 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತ್ತೊಂದು ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 1 ಕೋಟಿ 15 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಅಮೃತಹಳ್ಳಿ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತಿರುಪಾಲ್, ಕಮಲೇಶ್, ಸತೀಶ್ ಕುಮಾರ್ ಹಾಗೂ ಎಜಾಜ್ ಪಾಷಾ ಎಂದು ಗುರುತಿಸಲಾಗಿದೆ.

Home add -Advt

5 ಕೆಜಿ 600 ಗ್ರಾಂ ತೂಕದ ಹ್ಯಾಶ್ ಆಯಿಲ್, 3 ಕೆಜಿ 300 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಲಾಗಿದ್ದ ಕಾರು, ದ್ವಿಚಕ್ರವಾಹನ ಹಾಗೂ ನಾಲ್ಕು ಮೊಬೈಲ್ ಜಪ್ತಿ ಮಾಡಲಾಗಿದೆ.

Related Articles

Back to top button