Belagavi NewsBelgaum NewsKannada NewsKarnataka News

*ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಪ್ರವಾಹದ ಆತಂಕ*

ಪ್ರಗತಿವಾಹಿನಿ ಸುದ್ದಿ:  ಕೃಷ್ಣಾ ನದಿಗೆ 1,08,723 ಕ್ಯೂಸೆಕನಷ್ಟು ನೀರು ಹರಿದು ಬರುತ್ತಿದ್ದು, ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ನದಿತೀರದಲ್ಲಿ ಪ್ರವಾಹದ ಭೀತಿ ಸೃಷ್ಟಿಸಿಯಾಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಹರಿದುಹೋಗುವ ಕೃಷ್ಣಾ ನದಿ  ಪತ್ರಾದ ಜನ ಭಯದಲ್ಲಿ ವಾಸಿಸುತ್ತಿದ್ದಾರೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜನಿಂದ 84,083 ಕ್ಯೂಸೆಕನಷ್ಟು ಕರ್ನಾಟಕದ ಕೃಷ್ಣಾ, ದೂಧಗಂಗಾ, ವೇದಗಂಗಾ ಹರಿದು ಬರುತ್ತಿದೆ. ಒಟ್ಟು ಕಲ್ಲೋಳ ಬ್ಯಾರೇಜ್ ನ ಕೃಷ್ಣಾನದಿಗೆ 1,08,723 ಕ್ಯೂಸೆಕನಷ್ಟು ನೀರು ಹರಿದು ಬರುತ್ತಿದೆ.

ಕೃಷ್ಣಾ ನದಿ ಸೇರಿದಂತೆ ಉಪ ನದಿಗಳ ನೀರಿನ ಮಟ್ಟ ಸರಾಸರಿ 4 ಅಡಿಯಷ್ಟು ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಾಗುತ್ತಿದೆ. ನದಿತೀರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇಂದು ಮತ್ತೆ ಎರಡು ಬ್ಯಾರೇಜ್‌ಗಳು ಜಲಾವೃತಗೊಂಡಿವೆ. ಚಿಕ್ಕೋಡಿ-ನಿಪ್ಪಾಣಿ ತಾಲೂಕಿನ ಎಲ್ಲಾ 8 ಬ್ಯಾರೇಜ್‌ಗಳು ಜಲಾವೃತಗೊಂಡಿವೆ. ಇಂದು ವೇದಗಂಗಾ ನದಿಯ ಜತ್ರಾಟ-ಭಿವಸಿ, ಅಕ್ಕೋಳ-ಸಿದ್ದಾಳ ಬ್ಯಾರೇಜ್ ಗಳು ಜಲಾವೃತಗೊಂಡಿವೆ. 

ವೇದಗಂಗಾ ನದಿಯ ಬಾರವಾಡ-ಕುನ್ನೂರ, ಭೋಜ- ಶಿವಾಪುರವಾಡಿ, ದೂಧಗಂಗಾ ನದಿಯ ಕಾರದಗಾ-ಭೋಜ, ಮಲಿಕವಾಡ- ದತ್ತವಾಡ, ಕೃಷ್ಣಾ ನದಿಯ ಕಲ್ಲೋಳ- ಯಡೂರ ಮತ್ತು ಮಾಂಜರಿ-ಸವದತ್ತಿ ಬ್ಯಾರೇಜ್ ಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button