
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ದುರಂತಗಳು ಸಂಭವಿಸುತ್ತಿವೆ. ಹಾವೇರಿ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ಮನೆ ಕುಸಿದು ಇನ್ನೊಂದು ಮಗು ಸಾವನ್ನಪ್ಪಿದೆ.
ದಾವಣಗೆರೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಒಂದು ವರ್ಷದ ಮಗು ಸ್ಫೂರ್ತಿ ಸಾವನ್ನಪ್ಪಿದೆ. ಘಟನೆಯಲ್ಲಿ ಸ್ಫೂರ್ತಿಯ ತಂದೆ ಕೆಂಚಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಶಿಥಿಲಗೊಂಡಿತ್ತು, ಇದೀಗ ಇದ್ದಕ್ಕಿದ್ದಂತೆ ಮನೆ ಕುಸಿದಿದ್ದು, ದುರಂತವೇ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ