
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮಕ್ಕಳು ತುತ್ತಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಆತಂಕವನ್ನು ಹೆಚ್ಚಿಸಿದೆ. 13 ತಿಂಗಳ ಮಗುವೊಂದು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಗುವನ್ನು ಮೊದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಉಸಿರಾಟದ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.
ಬೆಳಗಾವಿ; 46 ಮಕ್ಕಳಿಗೆ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ