Latest

10 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಪ್ರದೇಶದ ಬಡಾಲ ಅಂಕಲಗಿ, ಬಡಸ್, ಹೊನ್ನಿಹಾಳ ಹಾಗೂ ಪಂತ ಬಾಳೇಕುಂದ್ರಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹತ್ತು ಕೋಟಿ ರೂ. ಗಳ ಅನುದಾನದಲ್ಲಿ ಅಭಿವೃದ್ಧಿಯ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
ಚುನಾವಣೆಯ ಪೂರ್ವದಲ್ಲಿ ಕೊಟ್ಟ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಇಡಿ ರಾಜ್ಯದಲ್ಲಿಯೇ ಒಂದು ಮಾದರಿ ಕ್ಷೇತ್ರವನ್ನಾಗಿಸಲಾಗುವುದು ಎಂದು ಅವರು ಈ ವೇಳೆ ಹೇಳಿದರು.
ಇದೇ ವೇಳೆ, ಕರಡಿಗುದ್ದಿ ಗ್ರಾಮದಲ್ಲಿ ಕರಡಿಗುದ್ದಿಯಿಂದ ಮರಕಟ್ಟಿಯವರೆಗೆ ಒಂದು ಕೋಟಿ ಮೂವತ್ತು ಲಕ್ಷ  ರೂ. ಅನುದಾನದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಸಹ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಗ್ರಾಮಸ್ಥರು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರು ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಇತರ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button