ಪ್ರಗತಿವಾಹಿನಿ ಸುದ್ದಿ: ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿತಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸರನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ 3 ಸೇತುವೆಗಳು ಕುಸಿದು ಬಿದ್ದಿವೆ.
10 ಸೇತುವೆಗಳು ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಇಲಾಖೆಯ 16 ಎಂಜಿನಿಯರ್ ಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಅಭಿವೃದ್ಧಿ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರನ್, ಕಿಶನ್ ಗಂಜ್ ಜಿಲ್ಲೆಗಳಲ್ಲಿ ಹತ್ತು ಸೇತುವೆಗಳು ಕುಸಿದಿವೆ. ಸೇತುವೆ ನಿರ್ಮಾಣ ಹೊಣೆಹೊತ್ತಿರುವ ಗುತ್ತಿಗೆದಾರರನ್ನು ಪತ್ತೆಹಚ್ಚುವ ಕಾರ್ಯ ನಡೆದಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿನ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸುವಂತೆ ಹಾಗೂ ತಕ್ಷಣ ದುರಸ್ಥಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ