Latest

*ಬಸ್ ಪಲ್ಟಿಯಾಗಿ 10 ಮಂದಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 10 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ನಡೆದಿದೆ.

ಬಸ್ ಮೊಳಕಾಲ್ಕೂರಿನಿಂದ ಚಳ್ಳಕೆರೆಗೆ ಬರುತ್ತಿದ್ದ ಸಂದರ್ಭ ಅತಿವೇಗದ ಚಾಲನೆ ಹಾಗೂ ಚಾಲಕನ ಅಜಾಗರೂಕತೆಯಿಂದಾಗಿ ಈ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Home add -Advt

ಗಾಯಾಳುಗಳನ್ನು ಕೂಡಲೇ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button