Kannada NewsKarnataka NewsLatestNational

10 ಲಕ್ಷ ರೂ. ಬಹುಮಾನ ಗೆಲ್ಲುವ ಅವಕಾಶ! ಮಿಸ್ ಮಾಡ್ಕೋಬೇಡಿ!!

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತನ ಫೋಟೋ ಬಿಡುಗಡೆ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್ ಐಎ ಅಧಿಕಾರಿಗಳು ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಸಿಸಿಬಿ ತನಿಖೆ ವೇಳೆ ಬಂಬರ್ ಮಾಸ್ಕ್ ಹಾಕಿಲ್ಲದ ಫೋಟೋವೊಂದು ಪತ್ತೆಯಾಗಿದ್ದು, ಇದೀಗ ಆಫೋಟೋವನ್ನು ಎನ್ ಐಎ ಬಿಡುಗಡೆ ಮಾಡಿದೆ. ಆರೋಪಿ ಬಗ್ಗೆ ಗೊತ್ತಿದ್ದರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಸಾರ್ವಜನಿಕರಲ್ಲಿ ಎನ್ ಐಎ ಮನವಿ ಮಾಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button