Latest

*ದಾಳಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರ ಸಾವು*

ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದ ಪೆಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿನ 9 ಉಗ್ರರ ಅಡಗುತಾಣಗಳ ಮೇಲೆ “ಆಪರೇಷನ್ ಸಿಂಧೂ‌ರ್” ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತರನ್ನು ಹತ್ಯೆಗೈಯ್ಯಲಾಗಿದೆ.

ಹಫೀಜ್ ಮಸೂದ್ ಅಜರ್ ನಿಷೇಧಿತ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಸ್ಥಾಪಕ ಮತ್ತು ಮುಖ್ಯಸ್ಥ. ಸತ್ತವರಲ್ಲಿ ಮಸೂದ್ ಅಜರ್‌ನ ಪತ್ನಿ, ಪುತ್ರ, ಸಹೋದರ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರವೂಫ್ ಅಸ್ಕರ್‌ನ ಪುತ್ರ ಹುಜೈಫಾ ಸೇರಿದ್ದಾರೆ. ರವೂಫ್ ಅಸ್ಲರ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಈ ಬಗ್ಗೆ ಪಾಕಿಸ್ತಾನದ ಪತ್ರಿಕೆ ಡೇಲಿ ಉರ್ದು ವಿಸ್ತಾರವಾದ ವರದಿ ಪ್ರಕಟ ಮಾಡಿದೆ. ಸ್ಥಳೀಯ ಮೂಲಗಳ ಪ್ರಕಾರ, ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ, ಆದರೆ ಇನ್ನೂ ಯಾವುದೇ ಅಧಿಕೃತ ದೃಢೀಕರಣ ಅಥವಾ ನಿರಾಕರಣೆ ಬಂದಿಲ್ಲ.

https://pragativahini.com/oparation-sindhoorsiddaramaiahpress

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button