Kannada NewsKarnataka NewsLatest
*ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
10 ವರ್ಷದ ಬಾಲಕಿ ಮೇಲೆ 16 ವರ್ಷದ ಹಾಗೂ 14 ವರ್ಷದ ಇಬ್ಬರು ಬಾಲಕರು ಅತ್ಯಾಚಾರವೆಸಗಿದ್ದಾರೆ. ಕಲಬುರ್ಗಿಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಈ ಕೃತ್ಯವೆಸಗಿದ್ದಲ್ಲದೇ ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಾಲಕಿ ತಂದೆ-ತಾಯಿ ಮುಂಬೈಗೆ ಕೆಲಸಕ್ಕಾಗಿ ಹೋಗಿದ್ದರು. ಬಾಲಕಿ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು.
ಆರೋಪಿಗಳ ವಿರುದ್ಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.



