ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಕಷ್ಟದಲ್ಲಿದ್ದ ಚಿತ್ರಮಂದಿರಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಕೋವಿಡ್ ನಿಯಂತ್ರಣ ಕುರಿತ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ರೇಟ್ ಶೇ.1ಕ್ಕಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗುವುದು. ಆದರೆ ಕನಿಷ್ಟ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಥಿಯೇಟರ್ ಪ್ರವೇಶಿಸಲು ಅವಕಾಶವಿದೆ ಎಂದರು.
ಶೇ.2ರಷ್ಟು ಕೋವಿಡ್ ಪಾಸಿಟಿವಿಟಿ ಕಂಡು ಬಂದ ಜಿಲ್ಲೆಗಳಲ್ಲಿ ತಕ್ಷಣ ಥಿಯೇಟರ್ ಗಳನ್ನು ಬಂದ್ ಮಾಡಲಾಗುವುದು. ಅಕ್ಟೋಬರ್ 3ರಿಂದ ಪಬ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಅಲ್ಲಿಯೂ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಎಂಟ್ರಿ ಇರುತ್ತದೆ. ಗರ್ಭಿಣಿಯರು ಹಾಗೂ ಮಕ್ಕಳಿಗೆ ಅವಕಾಶವಿಲ್ಲ. ಇನ್ನು ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿ 10ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಿದರು.
ಶಾಲಾ-ಕಾಲೇಜುಗಳಲ್ಲಿ ಶೇ.100ರಷ್ಟು ಭೌತಿಕ ತರಗತಿಗೆ ಅವಕಾಶ ನೀಡಲು ನಿರ್ಧರಿಸಲಾಗಿದ್ದು, ಸೋಮವಾರದಿಂದ ಶನಿವಾರದವರೆಗೂ ತರಗತಿಗಳನ್ನು ನಡೆಸಲು ಅನುಮತಿ ನೀಡಲಾಗುವುದು. ಇನ್ನು ದಸರಾಗೆ ಪ್ರತ್ಯೇಕವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಹೊಸ ಮಾರ್ಗಸೂಚಿ: ರಾಜ್ಯದಲ್ಲಿ ಕೊರೋನಾ ನಿಯಮಾವಳಿ ಇನ್ನಷ್ಟು ಸಡಿಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ