Kannada NewsKarnataka NewsLatestPolitics

*ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಗೆ ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ವೇಳೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪದ್ಮರಾಜ್ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ಬಿಜೆಪಿಯಲ್ಲಿದ್ದಾಗ ಆರ್.ಅಶೋಕ್ ನನ್ನ ಬಳಿ 1 ಕೋಟಿ ರೂಪಾಯಿ ಹಣ ಪಡೆದಿದ್ದರು ಎಂದಿದ್ದಾರೆ.

ನನ್ನನ್ನು ಮೇಯರ್ ಮಾಡುತ್ತೇನೆ ಎಂದು ನನ್ನ ಬಳಿ 1 ಕೋಟಿ ಹಣ ಪಡೆದಿದ್ದರು. ಇವತ್ತಿನವರೆಗೂ ಮೇಯರ್ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ ವಾಪಾಸ್ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ನಾನು ಕೆ. ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ್ದೇನೀ ಎಂಬುದು ಸತ್ಯಕ್ಕೆ ದೂರವಾದದ್ದು. ಕೊಲೆ ಬೆದರಿಕೆ ಹಾಕುವ ವ್ಯಕ್ತಿ ನಾನಲ್ಲ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ಹಣ ಕೊಟ್ಟಿದ್ದೆ. ಕೆಲಸ ಕೊಡಿಸಲಿಲ್ಲ ಅದಕ್ಕೆ ಕರೆ ಮಾಡಿದ್ದೆ. ಯಾವ ಬೆದರಿಕೆಯನ್ನೂ ಹಾಕಿಲ್ಲ ಎಂದಿದ್ದಾರೆ.


Related Articles

Back to top button