Latest

11 ವಿದ್ಯಾರ್ಥಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡುತ್ತಿದ್ದ ಕೇರಳ ಮೂಲದ 11 ಸೀನಿಯರ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದೇರಳಕಟ್ಟೆಯ ಕಣಚೂರು ಫಿಸಿಯೋಥೆರಪಿ ಹಾಗೂ ನರ್ಸಿಂಗ್ ಕಾಲೇಜಿನ ಸಿನಿಯರ್ ವಿದ್ಯಾರ್ಥಿಗಳು ತಮ್ಮ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡುತ್ತಿದ್ದರು. ಈ ಬಗ್ಗೆ ಕೆಲ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಟ್ಟು 18 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿತ್ತು.

ಈ ಹಿನ್ನೆಲೆಯಲ್ಲಿ ಕೇರಳ ಮೂಲದ ಒಟ್ಟು 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button