Karnataka News

*ಆಟವಾಡುತ್ತಿದ್ದಾಗ ದುರಂತ: ಕರೆಂಟ್ ಶಾಕ್ ಗೆ ಬಾಲಕಿ ಬಲಿ*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಬಾಲಕಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಈ ದುರಂತ ಸಂಭವಿಸಿದೆ ತನಿಷ್ಕಾ (11) ಮೃತ ಬಾಲಕಿ. ಮನೆಯ ಬಳಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button