ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನುಚಿತ ವರ್ತನೆ ಆರೋಪದಲ್ಲಿ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೆ ಅಮಾನತುಗೊಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಸಭಾಧ್ಯಕ್ಷ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ 12 ಬಿಜೆಪಿ ಶಾಸಕರನ್ನು ಕಳೆದ ಜುಲೈ 5ರಂದು ಅಮಾನತುಗೊಳಿಸಲಾಗಿತ್ತು. ಬಿಜೆಪಿ ಶಾಸಕರಾದ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ ಕುಚೆ, ರಾಮ್ ಸತ್ಪುಟೆ, ಬಂಟಿ ಭಂಗ್ಡಿಯಾ ಎಂಬ ಶಾಸಕರನ್ನು ಒಂದು ವರ್ಷ ಅಮಾನತು ಮಾಡಿ ವಿಧಾನಸಭಾ ಸ್ಪೀಕರ್ ಆದೇಶ ಹೊರಡಿಸಿದ್ದರು. ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಶಾಸಕರ ಅಮಾನತು ಆದೇಶ ರದ್ದುಗೊಳಿಸಿದೆ. ಅಲ್ಲದೇ ಅಧಿವೇಶನದ ಬಳಿಕ ಶಾಸಕರನ್ನು ಅಮಾನತುಗೊಳಿಸುವುದು ಅಸಂವಿಧಾನಿಕ ಹಾಗೂ ಕಾನೂನುಬಾಹಿರ ಎಂದು ಅಭಿಪ್ರಾಯಪಟ್ಟಿದೆ. ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತೆ ಮುಖಭಂಗವಾದಂತಾಗಿದೆ.
ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು; ಅರಿವು-ಅಂತ:ಕರಣ ಪಾಠದೊಂದಿಗೆ 6 ತಿಂಗಳ ಸಾಧನೆ ವಿವರಿಸಿದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ