ಪ್ರಗತಿವಾಹಿನಿ ಸುದ್ದಿ: ಕಳೆದ ತಿಂಗಳಷ್ಟೇ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಕ್ಸಲರನ್ನು ಎನ್ಕೌಂಟರ್ ಮಾಡಿದ್ದು, ಇಂದು ಮತ್ತೆ ಬಿಜಾಪುರ ಜಿಲ್ಲೆಯ ಗಂಗಲೂರ್ ಅರಣ್ಯ ಪ್ರದೇಶದಲ್ಲಿ ಅಡಗಿದ್ದ 12 ಜನ ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ನಕ್ಸಲರು ಗಂಗಲೂರ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಭದ್ರತಾ ಸಿಬ್ಬಂದಿ, ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಬಿಜಾಪುರ ಜಿಲ್ಲೆಯ ಗಂಗಲೂರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಇದುವರೆಗೆ ಎಲ್ಲ 12 ಶವಗಳು ಪತ್ತೆಯಾಗಿವೆ. ನಮ್ಮ ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳಿಗೆ ಅಭಿನಂದನೆಗಳು” ಎಂದು ನಕ್ಸಲರ ಕಾರ್ಯಾಚರಣೆ ಕುರಿತು ಛತ್ತೀಸ್‌ಗಢ ಸಿಎಂ ವಿಷ್ಣುದೇವ್ ಸಾಯಿ ಅವರು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ