
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಸ್ಥಾಪಿಸಲಾಗಿರುವ 120 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬಿಸಿಎಂ ಅಧಿಕಾರಿ ರಾಮನಗೌಡ ಕನ್ನೊಳ್ಳಿ, ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ