ಈ ವರ್ಷ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಇಲ್ಲ; ಜಿಲ್ಲಾಧಿಕಾರಿಗಳಿಂದ 13 ಮಾರ್ಗದರ್ಶಿ ಸೂತ್ರ ಬಿಡುಗಡೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.
ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ.
ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದೂ ಉಲ್ಲೇಖಿಸಿದ್ದಾರೆ.
ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ.
ಈ ಸಂಬಂಧ 13 ಮಾರ್ಗದರ್ಶಿ ಸೂತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ಇಲ್ಲಿದೆ ಸಮಗ್ರ ವಿವರ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ