
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಪೊಲೀಸರು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ 13 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಎಟಪಲ್ಲಿಯ ಕೋಟ್ಮಿ ಎಂಬಲ್ಲಿನ ಕಾಡಿನಲ್ಲಿ ನಕ್ಸಲರು ಮುಂಜಾನೆ ಸಭೆ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ಸಿ-60 ಕಮಾಂಡೊಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನಚಕಮಕಿ ನಡೆದಿದ್ದು, 13 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ ಎಂದು ಗಡ್ ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಸುಮಾರು ಒಂದು ಗಂಟೆಗಳ ಕಾಲ ಎನ್ ಕೌಮ್ತರ್ ಕಾರ್ಯಾಚರಣೆ ನಡೆದಿದೆ. ಇನ್ನೂ ಕೂಡ ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ ಹುಕ್ಕೇರಿ ಹಿರೇಮಠ; ಜನ ಸೇವೆಗೆ 2 ಆಂಬುಲೆನ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ