Latest

*ಡಿ.6ರಿಂದ 8 ವರೆಗೆ ಡಾ.ಶಿವಬಸವ ಮಹಾಸ್ವಾಮಿಗಳವರ 136ನೆಯ ಜಯಂತಿ ಮಹೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ನಾಗನೂರು ರುದ್ರಾಕ್ಷಿ ಮಠದ ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳವರ 136 ನೇ ಜಯಂತಿ ಮಹೋತ್ಸವವನ್ನು ಡಿಸೆಂಬರ್ 6 ರಿಂದ 8 ರವರೆಗೆ ಬೆಳಗಾವಿ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿ ಮಠದ ಆವರಣದಲ್ಲಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. 

ಶನಿವಾರ ದಿನಾಂಕ 6 ರಂದು ಮುಂಜಾನೆ 9:30 ಗಂಟೆಗೆ ಅರಭಾವಿ-ಕಡೋಲಿಯ ಜಗದ್ಗುರು ದುರದುಂಡೇಶ್ವರ ಸಿದ್ದ ಸಂಸ್ಥಾನ ಮಠದ ಶ್ರೀ. ಗುರುಬಸವಲಿಂಗ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಂದು ಸಂಜೆ 6 ಗಂಟೆಗೆ  ಕನ್ನಡ ರಾಜ್ಯೋತ್ಸವ ಹಾಗೂ “ಆತ್ಮಸ್ವಾಸ್ಯ ಶ್ರೀ” ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

Home add -Advt

ಕಾರ್ಯಕ್ರಮದ ಸಾನಿಧ್ಯವನ್ನು ಬೆಳಗಾವಿ ಕಾರಂಜಿ ಮಠದ ಶ್ರೀ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲೆಯ ಬೇಬಿಬೆಟ್ಟ  ಶ್ರೀ. ರಾಮಯೋಗೀಶ್ವರ ಮಠದ ಶ್ರೀ. ಶಿವಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ. ನೇತೃತ್ವದಲ್ಲಿ ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಬಸವ ದೇವರು ಹಾಗೂ ಸಮ್ಮುಖದಲ್ಲಿ ಜಾಗೀರ ಜಾಡಲದಿನ್ನಿಯ ಶ್ರೀ ನೀಲಾಂಬಿಕಾ ಬಸವ ಯೋಗಾಶ್ರಮದ ಶ್ರೀ ವೀರಭದ್ರ ಮಹಾಸ್ವಾಮಿಗಳು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಳ್ಳೇರಿಯ ಶ್ರೀ. ಬಸವಾನಂದ ಮಹಾಸ್ವಾಮಿಗಳಿಗೆ ಗೌರವ ಸನ್ಮಾನ ನೆರವೇರಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. 

 “ಆತ್ಮಸ್ವಾಸ್ಯ ಶ್ರೀ”ಪ್ರಶಸ್ತಿಯನ್ನು ದೆಹಲಿಯ ಡಾ. ಮೋಹಿತ್ ದಯಾಳ ಗುಪ್ತಾ ಅವರಿಗೆ ಪ್ರಧಾನ ಮಾಡಲಾಗುವುದು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಳಗಿನಹಟ್ಟಿಯ ಸನ್ನಿಂಗಪ್ಪಾ  ಮುಶೆನ್ನ ಗೋಳ ಮತ್ತು ಬೆಳಗಾವಿಯ ಪುಂಡಲೀಕ್  ವಾಷ್ಠರ್(ಶಾಸ್ತ್ರಿ) ಅವರನ್ನು ಸತ್ಕರಿಸಿ ಗೌರವಿಸಲಾಗುವುದು. “ಕನ್ನಡ ನುಡಿ ಶ್ರೀ” ಪ್ರಶಸ್ತಿಯನ್ನು ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಅಧ್ಯಕ್ಷ ಶಂಕರ್ ಹೂಗಾರ್ ಅವರಿಗೂ ಮತ್ತು ಗೋವಾದ ಕನ್ನಡ ಹೋರಾಟಗಾರ ಸಿದ್ದಣ್ಣ ಮೇಟಿ ಅವರಿಗೂ ಪ್ರದಾನ ಮಾಡಿ ಗೌರವಿಸಲಾಗುವುದು.

ರವಿವಾರ ದಿನಾಂಕ 7ರಂದು ಸಂಜೆ ಆರು ಗಂಟೆಗೆ ನಾಗನೂರು ರುದ್ರಾಕ್ಷಿ ಮಠದ ಹಳೆಯ ವಿದ್ಯಾರ್ಥಿಗಳ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ನಿಡಸೋಶಿ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಡಾ.ಪಂಚಮ ಶಿವಲಿಂಗೇಶ್ವರ ಮಹಾ ಸ್ವಾಮಿಗಳು ವಹಿಸಲಿದ್ದಾರೆ. ನೇತೃತ್ವವನ್ನು ಹುಲಿಸುರಿನ ವಿರಕ್ತಮಠದ ಶ್ರೀ. ಶಿವಾನಂದ ಮಹಾಸ್ವಾಮಿಗಳು ವಹಿಸಲಿದ್ದು, ಶೇಗುಣಸಿ ವಿರಕ್ತಮಠದ ಡಾ. ಮಹಾಂತ ಪ್ರಭು ಮಹಾಸ್ವಾಮಿಗಳು ಸಮ್ಮುಖದಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳಗಾವಿಯ ಹಿರಿಯ ಸಾಹಿತಿ ಶ್ರೀ.ಬಸವರಾಜ ಜಗಜಂಪಿ ಅವರಿಗೆ ಅಮೃತ ಗೌರವ ಅಭಿನಂದನೆ ಸಲ್ಲಿಸಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಕೆರೂರಿನ ಶಿಕ್ಷಣ ತಜ್ಞ ಎನ್.ಬಿ. ಬನ್ನೂರ್ ಆಗಮಿಸಲಿದ್ದು 

ನಾಗನೂರು ರುದ್ರಾಕ್ಷಿ ಮಠದ ಪ್ರಸಾದ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ ರೊಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಮಠದಿಂದ ಕೊಡ ಮಾಡುವ “ಪ್ರಸಾದ ಶ್ರೀ”ಪ್ರಶಸ್ತಿಯನ್ನು ಚೊಳಚಗುಡ್ಡದ ಹಿರಿಯವೈದ್ಯ ಡಾ. ಲಿಂಗಪ್ಪ  ಮಹಾಗುಂಡಪ್ಪ ಹಾದಿಮನಿ, ಬೆಳಗಾವಿ ವಿಮಾನ ಪ್ರಾಧಿಕಾರದ ಅಧಿಕಾರಿ ಸುಭಾಷ್ ಪಾಟೀಲ್, ಅನಿಗೋಳದ ನಾಗೇಶ್ ಮರಕುಂಬಿ ಮತ್ತು ಬೆಳಗಾವಿ ವಿಮಾನ ನಿಲ್ದಾಣದ ಪಿಎಸ್ಐ ಕಾಡಪ್ಪ ದೊಡಲಿಂಗನವರ ಅವರುಗಳಿಗೆ ಪ್ರದಾನ ಮಾಡಿ ಗೌರವಿಸಲಾಗುವುದು.

ಸೋಮವಾರ ದಿನಾಂಕ 8 ರಂದು ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳವರ 136 ನೇ ಜಯಂತಿ ಮಹೋತ್ಸವ ಸಮಾರಂಭ ನಡೆಯಲಿದೆ. ಸಾನಿಧ್ಯವನ್ನು ಡಂಬಳ- ಗದಗ ಎಡೆಯೂರು ಜಗದ್ಗುರು ತೋಂಟದಾರ್ಯ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ವಹಿಸಲಿದ್ದಾರೆ. ಧಾರವಾಡ ಮುರುಘಾ  ಮಠದ  ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ನೇತೃತ್ವವನ್ನು ಬೆಟ್ಟದಪುರದ ಸಲೀಲಾಖ್ಯ ವಿರಕ್ತ ಮಠದ  ಶ್ರೀ.ಚನ್ನಬಸವ ದೇಶಿ ಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.

ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸ್ಟೀಮ್ ಎಚ್ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲ ಸಚಿವ ಡಾ. ಪ್ರಸಾದ್ ರಾಮಪುರೆ ಮತ್ತು ಆಸ್ಟ್ರೇಲಿಯಾ ಮೆಲ್ಬರ್ನ್ ಎಫ್.ಪಿ.ಡಬ್ಲ್ಯೂ ಟೆಕ್ನಾಲಜಿಸ್ ಲಿಮಿಟೆಡ್ ಸಹಸಂಸ್ಥಾಪಕ ಡಾ. ಬಸನಗೌಡ ಪಾಟೀಲ್ ಆಗಮಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಶ್ರೀಮಠದಿಂದ ಕೊಡ ಮಾಡಲಾಗುವ “ಸೇವಾ ರತ್ನ ಪ್ರಶಸ್ತಿ” ಯನ್ನು ಬೆಳಗಾವಿಯ ಶ್ರೀ.ಬಸಲಿಂಗಪ್ಪ ವಣ್ಣೂರ, ಕಾವೇರಿ ಕಿಲಾರಿ, ಬಾಳಪ್ಪ ದೊಡ್ಡಬಂಗಿ ಮತ್ತು ಚಿಕ್ಕೋಪ್ಪದ ಚನ್ನಪ್ಪ ನರಸಣ್ಣವರ ಅವರುಗಳಿಗೆ ಪ್ರದಾನ ಮಾಡಿ ಗೌರವಿಸಲಾಗುವುದು.

Related Articles

Back to top button