Belagavi NewsBelgaum NewsKarnataka News

*ಏ.11 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಏಪ್ರಿಲ್ 11ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು‌ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಹೇಳಿದರು. 

ಇಂದು ನಗರದ ವಾರ್ತಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಪದ್ಮಶ್ರೀ ಪುರಸ್ಕೃತ ಪ್ರೊ.ಗಣೇಶ ನಾರಾಯಣದಾಸ್ ದೇವಿ ಘಟಿಕೋತ್ಸವ ಭಾಷಣ ಮಾಡುವರು ಎಂದು ತಿಳಿಸಿದರು.

Home add -Advt

ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ

ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯದಡಿ ನಿಡಸೋಸಿ ಮಠದ ಜಗದ್ಗುರು ಶಿವಲಿಂಗೇಶ್ವರ ಸ್ವಾಮೀಜಿ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್, ಕಾನೂನು, ನ್ಯಾಯ ಮತ್ತು ಸಾಂವಿಧಾನಿಕ ಅರಿವು ಸೇವೆಯಡಿ ಮುಖ್ಯ ನಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರಿಗೆ ಡಾಕ್ಟರ್ ಆಫ್ ಲಾ, ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಯಡಿ ವಿಜಯಪುರದ ವಿಜಯಪುರದ ಸೀಕ್ಯಾಬ್ ಅಧ್ಯಕ್ಷ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಗುವುದು ಎಂದು ಕುಲಪತಿಗಳು ತಿಳಿಸಿದರು.

ಘಟಿಕೋತ್ಸವದಲ್ಲಿ 46,013 ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳು, 2866 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಇದರಲ್ಲಿ 11 ಜನ ವಿದ್ಯಾರ್ಥಿಗಳಿಗೆ ಸುವರ್ಣ ಪದಕಗಳು, ಒಂದು ನಗದು ಬಹುಮಾನವನ್ನು ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 20 ಪಿಎಚ್ ಡಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

2023ರ ಘಟಿಕೋತ್ಸವ 2024ರಲ್ಲಿ ಮಾಡಲಾಗಿತ್ತು. 2024 ಘಟಿಕೋತ್ಸವ ಈಗ ಮಾಡುತ್ತಿದ್ದು, 2025ರ ಘಟಿಕೋತ್ಸವ ಇದೇ ವರ್ಷ ನವೆಂಬರ್ ನಲ್ಲಿ ನಡೆಸಲಿದ್ದೇವೆ. ಅದೇ ರೀತಿ ಶೈಕ್ಷಣಿಕ ವರ್ಷವನ್ನು ಸರಿಯಾದ ಸಮಯದಲ್ಲೆ ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಕುಲಪತಿಗಳು ಸ್ಪಷ್ಟಪಡಿಸಿದರು.

Related Articles

Back to top button