Latest

14 ಲಕ್ಷ ರೂ. ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಐಟಿ ಅಧಿಕಾರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

14 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಆದಾಯ ತೆರಿಗೆ ಇಲಾಖೆ ಅಧಿಕಾರಿಯನ್ನು ಬೆಂಗಳೂರಿನಲ್ಲಿ ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿ ನಾಗೇಶ್ ಬಂಧಿಸಲ್ಪಟ್ಟವರು.

40 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ 14 ಲಕ್ಷ ರೂ. ಹಣವನ್ನು ಮೊದಲ ಕಂತಿನಲ್ಲಿ ಸ್ವೀಕರಿಸುತ್ತಿದ್ದರು. ಬುಧವಾರ ರಾತ್ರಿ ಬೆಂಗಳೂರಿನ ಜಯನಗರದ ಕಾಫಿ ಡೇನಲ್ಲಿ ಬಿಲ್ಡರ್‌ ಒಬ್ಬರ ಬಳಿ ನಾಗೇಶ್ 14 ಲಕ್ಷ ರೂ. ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಬಿಲ್ಡರ್ ಕಚೇರಿ ಮತ್ತು ನಿವಾಸದ ಮೇಲೆ ಮಾರ್ಚ್ 6ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಈ ಪ್ರಕರಣದಿಂದ ಖುಲಾಸೆಗೊಳಿಸಲು ನಾಗೇಶ್ ಬಿಲ್ಡರ್ ಬಳಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

Home add -Advt

ಈ ಕುರಿತು ಸಿಬಿಐಗೆ ಬಿಲ್ಡರ್ ದೂರು ನೀಡಿದ್ದರು. ಹಣವನ್ನು ನೀಡುವಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ, ವಿಚಾರಣೆ ನಡೆಸುತ್ತಿದ್ದಾರೆ. 

Related Articles

Back to top button