Kannada NewsKarnataka NewsPolitics

*ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ; HDK ಹೊಸ ಬಾಂಬ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ನ ಯಾರೂ ಕೂಡ ಪಕ್ಷ ಬಿಟ್ಟು ಕಾಂಗ್ರೆಸ್ ಗೆ ಹೋಗುತ್ತಿಲ್ಲ. ಎಲ್ಲವೂ ಕೇಲ ವದಂತಿಯಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಆಪರೇಷನ್ ಹಸ್ತ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಯಾರೂ ಪಕ್ಷ ಬಿಟ್ಟು ಕಾಂಗ್ರೆಸ್ ಗೆ ಸೇರುತ್ತಿಲ್ಲ. ಕಾಂಗ್ರೆಸ್ ನವರೇ ಪಕ್ಷ ಬಿಡುತ್ತಿದ್ದಾರೆ. ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಹಾಗಾಗಿ ಬಿಜೆಪಿ, ಜೆಡಿಎಸ್ ನಿಂದ ಬರ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

Home add -Advt

ತಮ್ಮ ಶಾಸಕರು ಪಕ್ಷ ಬಿಡುವುದನ್ನು ತಡೆಯಲು ಬೇರೆ ಪಕ್ಷದವರು ಕಾಂಗ್ರೆಸ್ ಸೇರುತ್ತಿದ್ದರೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಸುಮ್ಮನೇ ಗುಮ್ಮ ಬಿಟ್ಕೊಂಡು ಓಡಾಡುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸರ್ವಪಕ್ಷ ಸಭೆಗೆ ಆಹ್ವಾನ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಸರ್ವಪಕ್ಷ ಸಭೆಗೆ ಹೋಗುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.


Related Articles

Back to top button