
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶುಕ್ರವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನೆಲ್ಲ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.
ಶುಕ್ರವಾರ ರಾತ್ರಿ ಪ್ರತಿಭಟನೆ ನೆಪದಲ್ಲಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿತ್ತು. ಒಂದು ವಾಹನಕ್ಕೆ ಬೆಂಕಿಯನ್ನೂ ಹಚ್ಚಲಾಗಿತ್ತು.
ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು 27 ಜನರನ್ನು ಬಂಧಿಸಿದ್ದಾರೆ. ಅವರನ್ನೆಲ್ಲ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆಲ್ಲ 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಹಿಂಡಲಗಾ ಜೈಲಿಗೆ ಕಳಿಸಲಾಗಿದೆ.
ಶಿವಾಜಿ ಸುಂಠಕರ್, ಪ್ರಕಾಶ ಶಿರೋಳ್ಕರ್ ವಿಚಾರಣೆ ಅಷ್ಟೆ, ಬಂಧಿಸಿಲ್ಲ – ಪೊಲೀಸರ ಸ್ಪಷ್ಟನೆ
ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು; 27 ಜನರ ಬಂಧನ: ನಿಷೇಧಾಜ್ಞೆ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ