ಪ್ರಗತಿವಾಹಿನಿ ಸುದ್ದಿ; ರೋಹ್ಟಕ್: ಕೋವಿಡ್ ಲಸಿಕೆ ಪಡೆದ 14 ವೈದ್ಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಘಟನೆ ರೋಹ್ಟಕ್ ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ.
ಇಲ್ಲಿನ 12 ವೈದ್ಯರು ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಇನ್ನಿಬ್ಬರು ಎರಡನೆ ಡೋಸೆಜ್ ಕೂಡ ಪಡೆದುಕೊಂಡಿದ್ದರು. ಆದರೆ ಈಗ ಈ 14 ವೈದ್ಯರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ.
ಇದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 22 ವೈದ್ಯರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿಗೆ ತುತ್ತಾದ ಬಾಲಿವುಡ್ ನಟಿ ಆಲಿಯಾ ಭಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ