
ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಬ್ಬರು ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿಗಳಿಬ್ಬರೂ ಒಂದೇ ಶಾಲಯ ವಿದ್ಯಾರ್ಥಿಗಳು ಎಂಬ ವಿಷಯ ಬೆಳಕಿಗೆ ಬಂದಿದೆ.
14 ವರ್ಷದ ಬಾಲಕಿಯನ್ನು ಆಕೆಯದ್ದೇ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಅಪ್ರಾಪ್ತರು ಸತತ ಅತ್ಯಾಚಾರ ಮಾಡಿ, ಆಕೆಯನ್ನು ಗರ್ಭವತಿಯನ್ನಾಗಿಸಿದ್ದು, ಅನಾರೋಗ್ಯದಿಂದ ಬಾಲಕಿ ಆಸ್ಪತ್ರೆಗೆ ದಾಖಲಾದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಖೇರ್ವಾಡಿ ಪೊಲೀಸರು 17 ವರ್ಷದ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಾಲಕರು ಸಂತ್ರಸ್ತ ಬಾಲಕಿಗೆ ಚಿರಪರಿಚಿತರು. ಆಗಾಗ ಬಾಂದ್ರಾದ ಬಾಲಕಿಯ ನಿವಾಸಕ್ಕೆ ಬರುತ್ತಿದ್ದರು. ಬಾಲಕಿ ಇತ್ತೀಚೆಗೆ ಅನಾರೋಗ್ಯಕ್ಕೀಡಾದಾಗ ಆಸ್ಪತ್ರೆಗೆ ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಬಾಲಕಿ ಗರ್ಭವತಿ ಎಂಬ ವಿಚಾರವನ್ನು ಆಕೆಯ ಪೋಷಕರು ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.
ಖೇರ್ವಾಡಿ ಪೊಲೀಸರು ಬಾಲಕಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ದಾಖಲಿಸಿದ್ದಾರೆ. ಇನ್ನು ಬಾಲಕಿಯ ತಾಯಿ ದೂರಿನ ಮೇರೆಗೆ ಇಬ್ಬರು ಅಪ್ರಾಪ್ತರ ವಿರ್ರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376(1), 376(2)(n), 376 (3) ಮತ್ತು 4,6,8 ಮತು 12 ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ಮಕ್ಕಳ ಕರೆಕ್ಷನ್ ಹೋಮ್ ಗಳಿಗೆ ಕಳುಹಿಸಲಾಗಿದೆ.
ಈ ಘಟನೆಯನ್ನು ಖೇರ್ವಾಡಿ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ರಾಜೇಂದ್ರ ಮುಲಿಕ್ ಖಚಿತಪಡಿಸಿದ್ದಾರೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ವಿಶೇಷವಾಗಿ ಮಕ್ಕಳು ಚಿಕ್ಕವರಿರುವಾಗ ಹಾಗೂ ಕುಟುಂಬದವರು ದೂರವಿರುವಾಗ ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ