Latest

ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ನಿರಂತರ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಗುರುಗ್ರಾಮ: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಪಕ್ಕದ ಮನೆಯ ವ್ಯಕ್ತಿಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಪಕ್ಕದ ಮನೆಯ 14 ವರ್ಷದ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿಯೇ ನೀಚ ಕೃತ್ಯವೆಸಗಿದ್ದಾನೆ. ಕಳೆದ ನಾಲ್ಕು ದಿನಗಳ ಹಿಂದೆ ಬಾಲಕಿಯನ್ನು ಅಪಹರಿಸಿದ್ದ ಆರೋಪಿ, ದೆಹಲಿ-ಜೈಪುರ್ ಹೆದ್ದಾರಿಯ ಬಿಲಾಸ್ ಪುರ್ ಚೌಕ್ ಬಳಿ ಬಚ್ಚಿಟ್ಟಿದ್ದ.

ಮಗಳು ನಾಪತ್ತೆಯಾಗಿರುವ ಬಗ್ಗೆ ಆತಂಕಗೊಂಡ ಮನೆಯವರು ಹುಡುಕಾಟ ನಡೆಸಿದ್ದಾರೆ. ಬಳಿಕ ಬಿಲಾಸ್ ಪುರ್ ಚೌಕ್ ಬಳಿ ಬಾಲಕಿ ಪತ್ತೆಯಾಗಿದ್ದು, ವಿಚಾರಿಸಿದಾಗ ಯುವಕ ತನ್ನನ್ನು ಮದುವೆಯಾಗುವಂತೆ ಬಲವಂತ ಮಾಡುತ್ತಿದ್ದು, ಕಳೆದ ಎರಡು ತಿಂಗಳಿಂದ ಪದೇ ಪದೇ ಅತ್ಯಾಚಾರ ನಡೆಸುತ್ತಿದ್ದಾನೆ. ವಿಷಯ ಬಾಯ್ಬಿಟ್ಟರೆ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಸಿದ್ದಾನೆ ಎಂದು ಬಾಲಕಿ ತಿಳಿಸಿದ್ದಾಳೆ.

ಬಾಲಕಿ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಲಾಸ್ ಪುರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ; ಮಹಾ ಸರ್ಕಾರದಿಂದ ಘೋಷಣೆ

Home add -Advt

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್; ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

Related Articles

Back to top button