Latest

14 ವರ್ಷ ಪೂರೈಸಿದ ಕೈದಿಗಳ ಬಿಡುಗಡೆ: ಇಂದು ಸಂಜೆ ಸಲಹಾ ಸಮಿತಿ ಸಭೆ

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ಕಳೆೆದ 14 ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿರುವ ಸನ್ನಡತೆಯ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಸಂಜೆ ಸಭೆ ನಡೆಯಲಿದೆ.

14 ವರ್ಷ ಪೂರೈಸಿದ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಚರ್ಚಿಸಿ ಪಟ್ಟಿ ಕಳಿಸುವಂತೆ ಜಿಲ್ಲಾ ಸತ್ರ ನ್ಯಾಯಾಧೀಶರು ಸೂಚಿಸಿದ್ದಾರೆ ಈ ಹಿನ್ನೆಲೆಯಲ್ಲಿ  ಜೈಲಿನ ಸಲಹಾ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ. ಸಂಜೆ 5.15ಕ್ಕೆ ಸಭೆ ನಡೆಯಲಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರು ಮತ್ತು ಮೂವರು ಅಧಿಕಾರೇತರ ಸದಸ್ಯರು ಸಲಹಾ ಮಂಡಳಿಯಲ್ಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button