ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು, ಒಮಿಕ್ರಾನ್ ನಿಯಂತ್ರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಜನವರಿ 31ರವರೆಗೆ 144ನೇ ಸೆಕ್ಷನ್ ವಿಸ್ತರಣೆ ಮಾಡಿ ಪೊಲೀಸ್ ಆಯುಕ್ತ ಕಮಲ್ ಪತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಜನವರಿ 31ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ರಾತ್ರಿ ವೇಳೆ ಮಾತ್ರವಲ್ಲ ಹಗಲಿನ ಅವಧಿಯಲ್ಲಿಯೂ 144 ಸೆಕ್ಷನ್ ಜಾರಿಯಲ್ಲಿರಲಿದ್ದು, 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ ಎಂದು ತಿಳಿಸಿದ್ದಾರೆ.
ಈ ತಿಂಗಳಾಂತ್ಯದವರೆಗೂ ಬೆಂಗಳೂರಿನಲ್ಲಿ ಯಾವುದೇ ಸಭೆ, ಸಮಾರಂಭ, ರ್ಯಾಲಿ, ಧರಣಿ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಆದೇಶ ನೀಡಿದ್ದಾರೆ. ನಿಯಮ ಉಲ್ಲಂಘನೆಯಾದರೆ ಎನ್ ಡಿಎಂಎ ಆಕ್ಟ್ ನಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಪೊಲೀಸ್ ಆಯುಕ್ತ ಕಮಲ್ ಪಂಥ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೊನಾ ನೆಗೆಟಿವ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ