ಸಮಾಜದ ಒಳಿತಿಗಾಗಿ ಕೆಎಲ್ಇ ಸಂಸ್ಥೆಯ ಕಾರ್ಯ ಶ್ಲಾಘನೀಯ – ಉಪರಾಷ್ಟ್ರಪತಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನ್ಯಾಯ, ಸಮಾನತೆ, ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ತ್ಯಾಗದ ಮಾರ್ಗದರ್ಶಿ ತತ್ವಾದರ್ಶಗಳ ಮೇಲೆ ಸಮಾಜವನ್ನು ನಿರ್ಮಿಸಿದ ಕೆಎಲ್ಇ ಸಂಸ್ಥೆಯ ಸಪ್ತರ್ಶಿಗಳ ಕಾರ್ಯ ಇಂದು ದೇಶದ ಪ್ರಗತಿಯಲ್ಲಿ ಕಂಡು ಬರುತ್ತಿದೆ. ನಂಬಲಾಸಾಧ್ಯವಾದ ವೈದ್ಯಕೀಯ ಮೂಲಸೌಕರ್ಯಗಳನ್ನು ಕಲ್ಪಿಸಿರುವದು ಅತ್ಯಂತ ಶ್ಲಾಘನೀಯ. ಅದರಂತೆ ಗುಣಮಟ್ಟದ ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ಬೋಧಕರ ಕೊಡುಗೆ ಅತ್ಯಂತ ಗಮನಾರ್ಹವಾಗಿದೆ. ಈ ಮಹಾನ್ ಸಂಸ್ಥೆ ನಿರ್ಮಿಸುವಲ್ಲಿ ಸಂಸ್ಥಾಪಕರ ತ್ಯಾಗ ಸ್ಮರಣೀಯ. ಸಮಾಜದ ಒಳಿತಿಗಾಗಿ ಆಡಳಿತ ಮಂಡಳಿಯು ಒಳ್ಳೆಯ ಕಾರ್ಯ ಮಾಡುತ್ತಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ ಹೇಳಿದರು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ)ನ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ 14ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ಪದವಿ ಪಡೆಯುವದು ಕಠಿಣ ಪರಿಶ್ರಮದ ಫಲವಾಗಿದ್ದು, ಜೀವನದಲ್ಲಿ ಎಂದೂ ಮರೆಯಲಾಗದ ಪ್ರಮುಖ ಮೈಲಿಗಲ್ಲು. ಯುವ ಪದವೀಧರರು ಮಾನವೀಯತೆಯ ಪ್ರತಿಬಿಂಬವಾಗಿ ಸೇವೆ ಸಲ್ಲಿಸುತ್ತ ದೇಶದ ಬೆಳವಣಿಗೆ ಮತ್ತು ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದೊಂದು ಜೀವನದ ಪ್ರಮುಖ ತಿರುವು ಆಗಬೇಕೆಂದು ಸಲಹೆ ನೀಡಿದರು. ಕಲಿಕೆಯು ಜೀವಿತಾವಧಿಯ ಪ್ರಮುಖ ಘಟ್ಟವಾಗಿದ್ದು, ಕಲಿಕೆಯು ಏಕೈಕ ಸ್ಥಿರ ಒಡನಾಡಿಯಾಗಿದೆ ಎಂದ ಅವರು, 1.3 ಶತಕೋಟಿ ಜನಸಂಖ್ಯೆಯ ಈ ದೇಶಕ್ಕೆ ನುರಿತ ತಜ್ಞವೈದ್ಯರು, ದಾದಿಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಅಗತ್ಯತೆ ಸಾಕಷ್ಟು ಇದೆ. ಈಗಿರುವ ಸಿಬ್ಬಂದಿಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ಮತ್ತು ಆರೈಕೆ ಮಾಡಲು ಕಡಿಮೆಯಾಗುತ್ತಿದ್ದಾರೆ ಎಂದು ವಿವರಿಸಿದರು. ದೇಶದ 5000 ವರ್ಷಗಳಷ್ಟು ಹಳೆಯ ನಾಗರಿಕತೆಯು ಆನುವಂಶಿಕವಾಗಿ ಶಕ್ತಿಯನ್ನು ಪಡೆದುಕೊಂಡಿದೆ. ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಮುಂಬರುವ 2047ರಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ. ವಿಶ್ವದಾದ್ಯಂತ ಭಾರತದ ಯುವಕರ ಧ್ವನಿಗಳು ಕೇಳಿಬರುತ್ತಿವೆ. ಯುವಕರು ಭಾರತದ ಅಭಿವೃದ್ಧಿ ಪಥದಲ್ಲಿ ಪ್ರಮುಖ ಪಾತ್ರವಹಿಸುತ್ತ, ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಕರೆ ನೀಡಿದರು. ಭಾರತವು ಅತ್ಯಧಿಕ ಸಂಖ್ಯೆಯ ಸ್ಟಾರ್ಟ್‌ಅಪ್‌ಗಳು, ಯುನಿಕಾರ್ನ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಯುವ ವೈದ್ಯರಿಗೆ ತಮ್ಮ ನಿಜವಾದ ಸಾಮರ್ಥ್ಯವನ್ನು ಹೊರಹಾಕಿ, ಕನಸುಗಳನ್ನು ಈಡೇರಿಸಿಕೊಳ್ಳಬೇಕು. ವೈದ್ಯಕೀಯ ಸೇವೆಯ ಪ್ರಾಥಮಿಕ ಧ್ಯೇಯವಾಕ್ಯ ಹಣವಲ್ಲ ಅದೊಂದು ಸೇವೆ ಎಂದು ಪರಿಗಣಿಸಿ ಸೇವೆ ನೀಡಿ. ಅದರಲ್ಲಿಯೂ ಮುಖ್ಯವಾಗಿ ಹಳ್ಳಿಗರ ಸೇವೆಯಲ್ಲಿ ತೊಡಗಿ ಎಂದ ಅವರು, ಶಿಕ್ಷಣದಿಂದ ಮಾತ್ರ ದೇಶವು ಸಾಮಾಜಿಕ-ಆರ್ಥಿಕ ಪರಿವರ್ತನೆಗಳಿಗೆ ಸಾಕ್ಷಿಯಾಗಬಹುದು ಎಂಬುದನ್ನು ಅರಿತ ಕೆಎಲ್‌ಇ ಸಂಸ್ಥೆಯು ಆ ಕನಸನ್ನು ನನಸು ಮಾಡುತ್ತಿದೆ ಎಂದು ಹೇಳಿದರು. ಕಾಹೆರನ ಪ್ರಥಮ ಗೌರವ ಡಾಕ್ಟರೇಟ್ ಪದವಿಯನ್ನು ಅಮೇರಿಕೆಯ ಫೆಲಡೆಲ್ಪಿಯಾದ ಥಾಮಸ್ ಝೆಫರಸನ್ ವಿಶ್ವವಿದ್ಯಾಲಯದ ವೈಸ್ ಪ್ರೊವೊಸ್ಟ್ ಡಾ. … Continue reading ಸಮಾಜದ ಒಳಿತಿಗಾಗಿ ಕೆಎಲ್ಇ ಸಂಸ್ಥೆಯ ಕಾರ್ಯ ಶ್ಲಾಘನೀಯ – ಉಪರಾಷ್ಟ್ರಪತಿ
Copy and paste this URL into your WordPress site to embed
Copy and paste this code into your site to embed