Latest

15೦ ಕೋಟಿ ರೂ.ಗಳ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣಕ್ಕೆ ಚಾಲನೆ : ಮಹಾಂತೇಶ ಕೌಜಲಗಿ

ಸಂಗೊಳ್ಳಿ ರಾಯಣ್ಣ ಉತ್ಸವ ಆರಂಭ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬೆಳಸಿಕೊಂಡು ಹೋಗುವುದರ ಜೊತೆಗೆ ಅನೇಕ ವೀರರು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ. ಅದರಲ್ಲಿ ರಾಯಣ್ಣ ಅವರು ಒಬ್ಬರು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಹೇಳಿದರು.
 ಸಂಗೊಳ್ಳಿ ಗ್ರಾಮದಲ್ಲಿ ಎರಡು ದಿನಗಳ ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಯುವ ಪೀಳಿಗೆಯಲ್ಲಿ ರಾಷ್ಟ್ರಭಕ್ತಿಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಉತ್ಸವವು ಪ್ರೇರಣೆಯಾಗಿ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ಹಾಗೂ ಅವರ ಶೂರತ್ವವನ್ನುಅಳವಡಿಸಿಕೊಳ್ಳಲಿ ಎಂದು ಅವರು ತಿಳಿಸಿದರು. 
ಈಗಾಗಲೇ ಸಂಗೊಳ್ಳಿಯಲ್ಲಿ 150 ಕೋಟಿ ರೂ.ದಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆಗೆ ಚಾಲನೆ ನೀಡಲಾಗಿದೆ. ಅಲ್ಲದೆ 14ಕೋಟಿ ರೂ.ಗಳಲ್ಲಿ ರಾಕ್ ಗಾರ್ಡನ್ ನಿರ್ಮಾಣ ಹಾಗೂ 70 ಕೋಟಿ ರೂ.ಯಲ್ಲಿ ನಂದಗಡದಲ್ಲಿ ಅತ್ಯಾಧುನಿಕ ಟೆಕ್ನಾಲಜಿಯನ್ನು ಉಪಯೋಗಿಸಿ ರಾಯಣ್ಣನ ಇತಿಹಾಸವನ್ನು ತಿಳಿಸಲು
ಪ್ರಾರಂಭ ಮಾಡಿದ್ದೇವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಸ್‌. ಬಿ. ಬೋಮ್ಮನಹಳ್ಳಿ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಕಿತ್ತೂರು ಸಾಮ್ರಾಜ್ಯದ ಕೀರ್ತಿಯನ್ನು ಬೆಳಗಿಸುವಲ್ಲಿ ಸಂಗೊಳ್ಳಿ ರಾಯಣ್ಣ ಅವರು ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಯುವ ಪೀಳಿಗೆಗೆ ಅವರ ತ್ಯಾಗ ಬಲಿದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿಯೊಂದು ಮನೆಯಲ್ಲಿ ಸಂಗೊಳ್ಳಿ ರಾಯಣ್ಣನಂತಹ ಮಕ್ಕಳು ಹುಟ್ಟಲಿ ಎಂದು ಆಶಿಸಿದರು.
ಸಮಾರಂಭದಲ್ಲಿ ಸಂಗೊಳ್ಳಿಯ ಶ್ರೀ ಗುರು ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯಸಾನಿಧ್ಯವಹಿಸಿದ್ದರು. ಸರ್ಕಾರದ ಮುಖ್ಯ ಸಚೇತಕರಾದ ಗಣೇಶ ಹುಕ್ಕೇರಿ, ಬೈಲಹೊಂಗಲ ತಾಲೂಕಾ ಪಂಚಾಯತ ಅಧ್ಯಕ್ಷರಾದ ಶೈಲಾ ಬ. ಶಿದ್ರಾಮಣಿ, ಜಿಲ್ಲಾ ಪಂಚಾಯತ ಸದಸ್ಯರಾದ ಅನಿಲ ಮೇಕಲಮರಡಿ, ತಾಲೂಕು ಪಂಚಾಯತ ಸದಸ್ಯರಾದ ಗೌಸಸಾಬ ಬುಡ್ಡೆಮುಲ್ಲಾ, ಸಂಗೊಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಯಲ್ಲವ್ವ ಹಳೆಮನಿ ಅವರು ಉಪಸ್ಥಿತರಿದ್ದರು.
ಲಕ್ಷ್ಮಣ ಚಿಂಗಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬೈಲಹೊಂಗಲ ಉಪವಿಭಾಗದಿಕಾರಿಗಳಾದ ಎಸ್.ವಾಯ್.ಭಜಂತ್ರಿ ಅವರು ಸ್ವಾಗತಿಸಿದರು. ಬೈಲಹೊಂಗಲ ತಹಶಿಲ್ದಾರರಾದ ಪ್ರಕಾಶ ಗಾಯಕವಾಡ ಅವರು ವಂದಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button