ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು; 15 ಜನ ಸಾವು

ಪ್ರಗತಿವಾಹಿನಿ ಸುದ್ದಿ; ಔರಂಗಾಬಾದ್: ರೈಲ್ವೆ ಹಳಿಗಳ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 15 ಜನರು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ.

ಔರಂಗಾಬಾದ್ ನ ಕರ್ಮಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ 6 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ.

ಜಲ್ನಾ ಮತ್ತು ಔರಂಗಾಬಾದ್ ನಡುವೆ 15 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಹರಿದಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯ ನಾಂದೇಡ್ ಡಿವಿಸನ್‌ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಾಯಗೊಂಡವರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಔರಂಗಾಬಾದ್ ನ ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Related Articles

Back to top button