Kannada NewsLatestNational

*ಎರಡು ಪ್ಯಾಸೆಂಜರ್ ರೈಲುಗಳ ನಡುವೆ ಅಪಘಾತ; ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕೊತ್ತವಲಸ ಮಂಡಲಂನಲ್ಲಿ ನಡೆದಿದೆ.

ಎರಡು ರೈಲುಗಳ ನಡುವೆ ಡಿಕ್ಕಿಯಾಗಿದ್ದು ಮೂವರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಒಡಿಶಾದ ರಗಡಕ್ಕೆ ತೆರಳುತ್ತಿದ್ದ ಪ್ಯಾಸೇಂಜರ್ ರೈಲು ಹಿಂಬದಿಯಿಂದ ಪಲಾಸ್ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಮೂರು ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು, ಎನ್ ಡಿಆರ್ ಎಫ್ ತಂಡ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.


Related Articles

Back to top button