Belagavi NewsBelgaum NewsKannada NewsKarnataka News

*ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ವಿಳಂಬ: ವಿದ್ಯಾರ್ಥಿಗಳ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಎಸ್ ಎ ಮತ್ತು ಬಿ ವೃಂದದ ಪರೀಕ್ಷೆ ವೇಳೆ ಯಡವಟ್ಟು ನಡೆದ ಘಟನೆ ಬೆಳಗಾವಿ ಅಂಜುಮನ್ ಕಾಲೇಜಿನಲ್ಲಿ ನಡೆದ‌ ಹಿನ್ನೆಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡವಾಗಿದೆ ಎಂದು ಬೆಳಗಾವಿ ಅಂಜುಮನ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಅದಲು, ಬದಲು ಆಗಿದೆ ಎಂದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದು ಪೊಲೀಸ್ ಅಧಿಕಾರಿಗಳ ಜೊತೆಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ, ಒಎಂಆರ್ ಶಿಟ್ ಅದಲು ಬದಲಾಗಿ ಗೊಂದಲ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ನೀಡಲು ಕೆಪಿಎಸ್ಸಿಗೆ ಪತ್ರ ಬರೆಯುತ್ತೇವೆ. ಸದ್ಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭ ಮಾಡಿದ್ದಾರೆ. ಒಎಂಆರ್ ಶಿಟ್ ಅದಲು, ಬದಲಾದ ಬಗ್ಗೆ ತನಿಖೆ ಮಾಡುತ್ತೇವೆ ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button