Kannada NewsLatestNationalPolitics

*ವಿಪಕ್ಷಗಳ 15 ಸಂಸದರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣ ಖಂಡಿಸಿ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದರು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ವಿಪಕ್ಷಗಳ 15 ಸಂಸದರನ್ನು ಅಮಾನತುಗೊಳಿಸಲಾಗಿದೆ.

ನಿನ್ನೆ ಸಂಸತ್ ನಲ್ಲಿ ನಡೆದ ಭದ್ರತಾ ಲೋಪ ಪ್ರಕರಣ ಇಂದು ಕೂಡ ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆಗೆ ನುಗ್ಗಿ ಕಲರ್ ಸ್ಪ್ರೇ ಸಿಡಿಸಿದ ದುಷ್ಕರ್ಮಿಗಳಿಬ್ಬರಿಗೆ ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸುವಂತೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು.

ಲೋಕಸಭಾ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ-ಕೋಲಾಹಲವುಂಟುಮಾಡಿದ ಹಿನ್ನೆಯಲ್ಲಿ ಲೋಕಸಭೆಯ 14 ಸಂಸದರನ್ನು ಅಮಾನತುಗೊಳಿಸಲಾಯಿತು.

ಇದೇ ವೇಳೆ ರಾಜ್ಯಸಭೆಯಲ್ಲಿಯೂ ವಿಪಕ್ಷ ಸದಸ್ಯರು ಸಂಸತ್ ಭದ್ರತಾ ಲೋಪದ ಬಗ್ಗೆ ಕೇಂದ್ರಸರ್ಕಾರದ ವಿರುದ್ಧ ಕಿಡಿಕಾರಿದರು. ಪಾಸ್ ನೀಡಿದ ಸಂಸದರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಿಯಾನ್ ರಾಜ್ಯಸಭೆ ಬಾವಿಗಿಳಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಕೇಂದ್ರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಈ ಹಿನ್ನೆಲೆಯಲ್ಲಿ ಡೆರಿಕ್ ಒಬ್ರಾಯ್ ಅವರನ್ನು ಸಂಸತ್ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಯಿತು.

ಸಂಸದರಾದ ಜ್ಯೋತಿಮಣಿ, ಹೈಬಿ ಈಡನ್, ಡೀನ್ ಕುರಿಯಾಕೋಸ್, ಪ್ರತಾಪನ್, ರಮ್ಯಾ ಹರಿದಾಸ್, ಕನಿಮೊಳಿ, ಮಾಣಿಕ್ಯಂ ಠಾಕೂರ್, ಬೆನ್ನಿ ಬೆಹನನ್, ವಿ.ಕೆ.ಶ್ರೀಕಂದನ್, ಮೊಹಮ್ಮದ್ ಜಾವೇದ್, ಪಿ.ಆರ್.ನಟರಾಜ್, ಕೆ.ಸುಬ್ರಹ್ಮಣ್ಯಂ, ಎಸ್.ಆರ್.ಪಾರ್ಥಿಬನ್, ವೆಂಕಟೆಶನ್ ಹಾಗೂ ರಾಜ್ಯಸಭೆ ಸದಸ್ಯ ಡೆರೆಕ್ ಓಬ್ರಿಯಾನ್ ಅಮಾನತುಗೊಂಡವರು. 15 ಸಂಸದರನ್ನು ಸಂಸತ್ ಅಧಿವೇಶನ ಮುಗಿಯುವವರೆಗೂ ಸಸ್ಪೆಂಡ್ ಮಾಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button