Karnataka News

*ಅಪ್ರಾಪ್ತ ಬಾಲಕರ ಕಿರುಕುಳ: ಬಾಲಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕರು ಪ್ರೀತಿಸುವಂತೆ ಒತ್ತಾಯಿಸಿ ಪೀಡಿಸುತ್ತಿದ್ದ ಕಾರಣಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

ಇಂಪನಾ (15) ಅತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಅದೇ ಗ್ರಾಮದ ಬಾಲಕರ ನಡುವೆ ಜಗಳವಾಗಿದೆ. ಮಾತಿನ ಚಕಮಕಿ ನಡೆದಿದೆ. ಇದರ ಆಡಿಯೋ ವೈರಲ್ ಆಗಿದೆ. ಈ ಆಡಿಯೋವನ್ನು ಬಾಲಕಿ ತಾಯಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾರೆ.

Home add -Advt

ಇದರಿಂದ ನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಸಾವನ್ನಪ್ಪುತ್ತಿದ್ದಂತೆ ಅಪ್ರಾಪ್ತ ಬಾಲಕರು ಗ್ರಾಮದಿಂದಲೇ ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಬಾಲಕರಿಗಾಗಿ ಹುಡುಕಾಟ ನಡೆಸಿದ್ದಾರೆ.


Related Articles

Back to top button