ಪ್ರಗತಿವಾಹಿನಿ, ಬೆಳಗಾವಿ:
ನಗರಾಭಿವೃದ್ಧಿ ಸಚಿವ ಯು. ಟಿ. ಖಾದರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಯಾದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಬೆಳಗಾವಿ ನಗರದ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ, ಚರಂಡಿ ಮತ್ತು ಒಳಚರಂಡಿ ಸಮಸ್ಯೆ, ಕಸ ವಿಲೇವಾರಿ ಸಮಸ್ಯೆಗಳ ಕುರಿತು ಗಮನ ಸೆಳೆದರು.
ಅಲ್ಲದೇ, ಬೆಳಗಾವಿ ನಗರದ ಅಭಿವೃದ್ಧಿ ಗೆ 150 ಕೋಟಿ ರೂಪಾಯಿಗಳ ಅನುದಾನ ಮೀಸಲಿಡುವ ಬಗ್ಗೆ ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು, ಆದರೆ ಈ ಅನುದಾನ ಇನ್ನೂವರೆಗೂ ಬಿಡುಗಡೆ ಆಗಿಲ್ಲ, ಎನ್ನುವ ಸಂಗತಿಯನ್ನು ಅಭಯ ಪಾಟೀಲ ಸಚಿವರ ಗಮನಕ್ಕೆ ತಂದರು.
ಬರುವ ಕ್ಯಾಬಿನೆಟ್ ನಲ್ಲಿ ಬೆಳಗಾವಿ ನಗರದ ಅಭಿವೃದ್ಧಿ ಗೆ 150 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು ಎಂದು ಅಭಯ ಪಾಟೀಲ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ