Belagavi NewsBelgaum NewsKannada NewsKarnataka NewsPolitics
*ಭಗವಾನ್ ಬಿರ್ಸಾ ಮುಂಡಾರವರ 150ನೇ ಜನ್ಮದಿನ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಭಗವಾನ್ ಬಿರ್ಸಾ ಮುಂಡಾರವರ 150ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಶ್ರೀ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ್ ಕುರಿಹುಲಿ, ಸಮಾಜದ ಮುಖಂಡರಾದ ಬಾವುಕಣ್ಣ ಬಂಗ್ಯಾಗೊಳ್, ಬಲರಾಮ್ ಮಾಸೇನಟ್ಟಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆ, ಜನಜಾತಿ ಸಮಾಜದ ಗೌರವ, ಹಾಗೂ ಅವರ ರಾಷ್ಟ್ರ ನಿರ್ಮಾಣದಲ್ಲಿ ನೀಡಿದ ಕೊಡುಗೆಗಳ ಕುರಿತು ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರಸ್ತಾಪಿಸಲಾಯಿತು.


