ಪ್ರಗತಿವಾಹಿನಿ ಸುದ್ದಿ: ಹಾಲಿ 151 ಸಂಸದರು ಮತ್ತು ಶಾಸಕರ ವಿರುದ್ಧ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ ಎಂದು ಎಡಿಆರ್ ನಡೆಸಿದ ಇತ್ತೀಚಿನ ಸಮೀಕ್ಷೆಯ ವರದಿ ತಿಳಿಸಿದೆ.
ಜನಪ್ರತಿನಿಧಿಗಳು ಸಲ್ಲಿಸಿರುವ ಚುನಾವಣಾ ಅಫಿಡವಿಟ್ ಅಧ್ಯಯನ ನಡೆಸಿ ಈ ವರದಿ ತಯಾರಿಸಲಾಗಿದೆ. ಪಶ್ಚಿಮ ಬಂಗಾಳದ ಹೆಚ್ಚಿನ ಸಂಖ್ಯೆಯ ಶಾಸಕರು ಇಂತಹ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2019 ಮತ್ತು 2024ರ ನಡುವಿನ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಹಾಲಿ ಸಂಸದರು ಮತ್ತು ಶಾಸಕರ 4,809 ಅಫಿಡವಿಟ್‌ಗಳಲ್ಲಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ ಪರಿಶೀಲನೆ ನಡೆಸಿದೆ. 16 ಸಂಸದರು ಮತ್ತು 135 ಶಾಸಕರ ವಿರುದ್ಧ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳದ 25 ಹಾಲಿ ಸಂಸದರು ಮತ್ತು ಶಾಸಕರು ಮಹಿಳೆಯರ ವಿರುದ್ಧದ ವಿವಿಧ ಅಪರಾಧಗಳಿಗೆ ಸಂಬಂಧಿಸಿದ ಆರೋಪ ಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ