Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ನಡೆದಿದೆ.

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಹರಗಾಪುರ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ ಬಸ್ ನಿಲ್ಲಿಸಿ ಬಸ್ ನಲ್ಲಿದ್ದ 28 ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

Home add -Advt

ನೋಡ ನೋಡುತ್ತಿದ್ದಂತೆ ಬಸ್ ತುಂಬ ಬೆಂಕಿ ಆವರಿಸಿ ಕನ್ಂಉಂದೆಯೇ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ.

ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button