ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯಾದ್ಯಂತ ಕೊರೊನಾ ಮೂರಲೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಪುಟ್ಟ ಪುಟ್ಟ ಮಕ್ಕಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಒಂದೇ ಜಿಲ್ಲಿಯ 1,639 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಆತಂಕ ಎದುರಾಗಿದೆ.
1ರಿಂದ 5 ವರ್ಷದ 46 ಮಕ್ಕಳು ಹಾಗೂ 6ರಿಂದ 18 ವರ್ಷದ 1,593 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮಕ್ಕಳನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಡಿಹೆಚ್ ಒ ಡಾ.ಧನಂಜಯ ಮಾಹಿತಿ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ರಾಜ್ಯ ಸರ್ಕಾರ ಗೊಂದಲದಲ್ಲಿರುವ ನಡುವೆ ಮಂಡ್ಯದಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಅಶ್ವಥಿ ಜಿಲ್ಲೆಯಾದ್ಯಂತ ಕರ್ಫ್ಯೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ತಿಂಗಳಾಂತ್ಯದವರೆಗೂ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಉಲ್ಲಂಘನೆಯಾದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಶಾಸಕ ಬೆನಕೆ ಸೇರಿದಂತೆ 27 ಜನರ ವಿರುದ್ಧ FIR ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ