Kannada NewsLatest

ಬೆಳಗಾವಿ ಡಿಸಿ ಎಂ.ಜಿ.ಹಿರೇಮಠ ಸೇರಿದಂತೆ 17 ಐಎ ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 17 ಐಎ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಬೆಳಗಾವಿ ಡಿಸಿ ಎಂ.ಜಿ.ಹಿರೇಮಠ ಸೇರಿದಂತೆ ಹಲವು ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Home add -Advt

ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ವರ್ಗಾವಣೆಗೊಳಿಸಿ ಡಿಪಿಎ ಆರ್ (ಇ-ಆಡಳಿತ)ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಿಬಿಎಂಪಿಗೆ ತುಷಾರ್ ಗಿರಿನಾಥ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಕೆಪಿ ಸಿಎಲ್ ಎಂಡಿ ಹುದ್ದೆ ಹೆಚ್ಚುವರಿ ಹೊಣೆ
ಟಿ.ಕೆ.ಅನೀಲ್ ಕುಮಾರ್- ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
ಮನೋಜ್ ಜೈನ್ -ಕಾರ್ಮಿಕ ಇಲಾಖೆ ಕಾರ್ಯದರ್ಶಿ
ಖುಷ್ಬೂ ಜಿ ಚೌದರಿ – ಕರ್ನಾಟಕ ಭವನ ಉಪ ಆಯುಕ್ತರು
ಡಾ.ರಾಜೇಂದ್ರ ಕೆ – ಕೆಪಿ ಎಸ್ಸಿ ಕಾರ್ಯದರ್ಶಿ
ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕೆ ಆರ‍್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಬೆಳಗಾವಿಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.

ಗುರುದತ್ತ್ ಹೆಗ್ಡೆ-ಧಾರವಾಡ ಜಿಲ್ಲಾಧಿಕಾರಿ

ಭೂಬಾಲನ್ ಟಿ – ಬಾಗಲಕೋಟೆ ಜಿಲ್ಲಾಧಿಕಾರಿ
ಪ್ರಸನ್ನ ಹೆಚ್ – ಉಡುಪಿ ಜಿಲ್ಲಾ ಪಂಚಾಯತ್ ಸಿಇಒ
ಗಿರೀಶ್ ದಿಲೀಪ್ ಬಡೋಲೆ – ಕಲಬುರ್ಗಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಕ ಮಾಡಲಾಗಿದೆ.

ಒಟ್ಟು 17 ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – e DPAR 190 SAS 2022 dated 05.05.2022

ಡಿವೈ ಎಸ್ ಪಿ ಮಲ್ಲಿಕಾರ್ಜುನ, ಸಿಪಿಐ ಆನಂದ್ ಬಂಧನ

Related Articles

Back to top button