Latest

ಮದುವೆಗೆ ಒಪ್ಪದ ಬಾಲಕಿ; ಸುತ್ತಿಗೆಯಿಂದ ಹೊಡೆದುಕೊಂದ ವ್ಯಕ್ತಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಹೊಡೆದು ಕೊಂದ ಹೃದಯ ವಿದ್ರಾವಕ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ನೀತು ಎಂದು ಗುರುತಿಸಲಾಗಿದೆ. ಆರೋಪಿ ಲೈಕ್ ಖಾನ್ ಬಾಲಕಿಗೆ ತನ್ನನ್ನು ಮದುವೆಯಾಗುವಂತೆ ಬಲವಂತ ಮಾಡುತ್ತಿದ್ದ.

Home add -Advt

ಲೈಕ್ ಖಾನ್ ಮದುವೆ ಪ್ರಸ್ತಾಪವನ್ನು ನೀತು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಖಾನ್ ನೀತು ಮನೆಯಲ್ಲಿಯೇ ಆಕೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ.

Related Articles

Back to top button